ರಾಜ್ಯದಲ್ಲಿ ಸರ್ಕಾರಿ ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಕೆಎಸ್‌ಆರ್‌ಟಿಸಿ (KSRTC) ಶೇ. 33 ರಷ್ಟು ಹಾಗೂ ಬಿಎಂಟಿಸಿ (BMTC) ಶೇ. 44 ರಷ್ಟು ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿವೆ. ಇಂಧನ ಬೆಲೆ ಏರಿಕೆ, ನೌಕರರ ವೇತನ ಪರಿಷ್ಕರಣೆ ಮತ್ತು ಸಾರಿಗೆ ಸಂಸ್ಥೆಗಳ ಆರ್ಥಿಕ ನಷ್ಟವನ್ನು ಸರಿದೂಗಿಸಲು ಈ ನಿರ್ಧಾರ ಅನಿವಾರ್ಯ ಎಂದು ಸಂಸ್ಥೆಗಳು ವಾದಿಸುತ್ತಿವೆ. ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಪ್ರಯಾಣವಿರುವ ಬೆನ್ನಲ್ಲೇ ಈ ದರ ಏರಿಕೆ ಪ್ರಸ್ತಾಪ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.







