ಹೈದರಾಬಾದ್‌ನಲ್ಲಿ ನಡೆದ ‘ಪುಷ್ಪ 2’ ಚಿತ್ರದ ಪ್ರಚಾರದ ವೇಳೆ ಸಂಭವಿಸಿದ ದುರದೃಷ್ಟಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ, ವೈಯಕ್ತಿಕ ಕಾರಣಗಳಿಂದಾಗಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದ ಹಿನ್ನೆಲೆಯಲ್ಲಿ, ನ್ಯಾಯಾಲಯ ಹಾಗೂ ತನಿಖಾ ಸಂಸ್ಥೆಯು ಅವರ ವಿಚಾರಣೆಯನ್ನು ಜುಲೈ 6 ಕ್ಕೆ ಮುಂದೂಡಿದೆ ಎಂದು ಮೂಲಗಳು ತಿಳಿಸಿವೆ.







