ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ರಾಮ ಮಂದಿರ ದೇಣಿಗೆ ಹಗರಣ, ಸಿಬಿಐ ತನಿಖೆಗೆ ಕೋರಿ ಅರ್ಜಿ

ಅಯೋಧ್ಯೆ(Ayodhya)ಯ ಶ್ರೀ ರಾಮ ಮಂದಿರದಲ್ಲಿ ನಡೆದ ಆರ್ಥಿಕ ಅಕ್ರಮಗಳು ಮತ್ತು ಕಣ್ಮರೆಯಾಗಿರುವ ಕಾಣಿಕೆ ಹಣದ ವಿವಾದ ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ರಾಮ ಮಂದಿರದ ದೇಣಿಗೆ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಮತ್ತು ಕೇಂದ್ರೀಯ ತನಿಖಾ ದಳದ (CBI) ಅಡಿಯಲ್ಲಿ ಹೊಸ ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ವಕೀಲರಾದ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಅವರು ಈ ಜಂಟಿ ಅರ್ಜಿಯನ್ನು ಸಲ್ಲಿಸಿದ್ದಾರೆ. ದೇವಸ್ಥಾನದ ದೇಣಿಗೆ ರಿಜಿಸ್ಟರ್‌ಗಳು, ಆಡಿಟ್ ವರದಿಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಬ್ಯಾಂಕ್ ದಾಖಲೆಗಳು ಸೇರಿದಂತೆ ಎಲ್ಲಾ ಡಿಜಿಟಲ್ ಹಾಗೂ ಭೌತಿಕ ಸಾಕ್ಷ್ಯಗಳನ್ನು ರಾಮ ಮಂದಿರ ಟ್ರಸ್ಟ್ ಮತ್ತು ಉತ್ತರ ಪ್ರದೇಶ ಸರ್ಕಾರ ತಕ್ಷಣವೇ ಸುರಕ್ಷಿತವಾಗಿ ಸಂರಕ್ಷಿಸಿಡಬೇಕು.

ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಆಸ್ತಿ, ಹಣ ಅಥವಾ ಎಲೆಕ್ಟ್ರಾನಿಕ್ ಡೇಟಾವನ್ನು ಯಾರೂ ನಾಶಪಡಿಸದಂತೆ ಅಥವಾ ತಿರುಚದಂತೆ ಕೋರ್ಟ್ ಕಟ್ಟುನಿಟ್ಟಿನ ತಡೆಜ್ಞೆ ನೀಡಬೇಕು.ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶದ ಕೋಟ್ಯಂತರ ಭಕ್ತರು ತಮ್ಮ ಕಷ್ಟದ ಹಣವನ್ನು ದಾನ ಮಾಡಿದ್ದಾರೆ. ಇಂತಹ ಪವಿತ್ರ ನಿಧಿಯ ನಿರ್ವಹಣೆಯಲ್ಲಿ ಪಾರದರ್ಶಕತೆ ತೋರದಿದ್ದರೆ ಅದು ಸಾರ್ವಜನಿಕರ ನಂಬಿಕೆ ಮತ್ತು ಭಾವನೆಗಳಿಗೆ ಧಕ್ಕೆ ತರುತ್ತದೆ.

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles