ಮಾಜಿ ಸಿಎಂ ಕೈ ಹಿಡಿದ ಟಗರು ಸರೋಜಾ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತ್ರಿವೇಣಿ ರಾವ್

ಕನ್ನಡದ ಜನಪ್ರಿಯ ಚಿತ್ರ ‘ಟಗರು’ನಲ್ಲಿ ಸರೋಜಾ ಪಾತ್ರದ ಮೂಲಕ ಪ್ರೇಕ್ಷಕರ ಮನಗೆದ್ದ ನಟಿ ತ್ರಿವೇಣಿ ರಾವ್ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ. ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ತ್ರಿವೇಣಿ ರಾವ್, ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಬಿಜೆಪಿ ಸಂಸದ ಬಿಪ್ಲಬ್ ಕುಮಾರ್ ದೇವ್ ಅವರೊಂದಿಗೆ ವಿವಾಹವಾಗಿದ್ದಾರೆ ಎನ್ನಲಾಗಿದೆ.

ದೆಹಲಿ ನಗರದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ರಾಜಕೀಯ ಮತ್ತು ಚಿತ್ರರಂಗದ ಗಣ್ಯರು ನವದಂಪತಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.‌ ಈ ಕುರಿತು ಅಧಿಕೃತ ಘೋಷಣೆ ಇನ್ನೂ ಬಂದಿಲ್ಲ.

ತ್ರಿವೇಣಿ ರಾವ್, ಸೂರಿ ನಿರ್ದೇಶನದ, ಶಿವರಾಜ್‌ಕುಮಾರ್, ಡಾಲಿ ಧನಂಜಯ್ ಅಭಿನಯದ ಟಗರು ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದರು. ಕಾನ್ಸ್‌ಟೇಬಲ್ ಸರೋಜಾ ಎಂಬ ಕ್ಯಾರೆಕ್ಟರ್ ಮಾಡಿದ್ದ ತ್ರಿವೇಣಿ ರಾವ್, ಅಂದು ಕನ್ನಡಿಗರ ಹೊಸ ಕ್ರಶ್ ಆಗಿದ್ದರು.

ಬಳಿಕ ತ್ರಿವೇಣಿ ರಾವ್ ಹಲವು ಸಿನಿಮಾಗಳಲ್ಲಿ ನಟಿಸಿದ್ರು. ತಾಯಿಗೆ ತಕ್ಕ ಮಗ, ರಾಜ ಮಾರ್ತಾಂಡ, ಸಲಗ, ಯುವರತ್ನ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದ ತ್ರಿವೇಣಿ ರಾವ್, ಬಳಿಕ ತೆಲುಗಿನಲ್ಲೂ ಕೆಲವು ಸಿನಿಮಾಗಳಲ್ಲಿ ಲೀಡ್ ರೋಲ್‌ನಲ್ಲಿ ಕಾಣಿಸಿಕೊಂಡರು. ಇದಾದ ಬಳಿಕ ತಮ್ಮ ಹೆಸರನ್ನು ರುಷಿಕಾ ರಾಜ್ ಎಂದು ಬದಲಾಯಿಸಿಕೊಂಡರು

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles