ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿದೆ ಎಂದ ಟ್ರಂಪ್​ಗೆ ಇರಾನ್ ತಿರುಗೇಟು

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ಸ್ವಿಟ್ಜರ್​ಲ್ಯಾಂಡ್​ನಲ್ಲಿ ನಡೆದ ಮಾತುಕತೆಗಳು ಯಶಸ್ವಿಯಾಗಿವೆ ಎಂದು ಅಮೆರಿಕ ಸಂಭ್ರಮಿಸುತ್ತಿದೆ. ಆದರೆ ಜಗತ್ತಿನ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಉಭಯ ದೇಶಗಳ ನಡುವಿನ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಜಲಸಂಧಿಯ ಮೇಲೆ ನಮಗೆ ಸಂಪೂರ್ಣ ನಿಯಂತ್ರಣವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಹೇಳಿದ್ದರೆ, ಜಲಸಂಧಿ ಇನ್ನು ಮುಂದೆ ಇರಾನ್ ನಿಯಮಗಳಂತೆಯೇ ನಡೆಯಲಿದೆ ಎಂದು ಇರಾನ್ ತಿರುಗೇಟು ನೀಡಿದೆ.

ಸ್ವಿಟ್ಜರ್‌ಲ್ಯಾಂಡ್ ಮಾತುಕತೆಯಿಂದ ಹಿಂತಿರುಗಿದ ಇರಾನ್‌ನ ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಗಾಲಿಬಾಫ್ ಮಾತನಾಡಿ, ಹಾರ್ಮುಜ್ ಜಲಸಂಧಿಯ ನಿರ್ವಹಣೆ ಯುದ್ಧದ ಮುಂಚೆ ಇದ್ದ ಸ್ಥಿತಿಗೆ ಎಂದಿಗೂ ಮರಳುವುದಿಲ್ಲ. ಇನ್ನು ಮುಂದೆ ಅದು ಇರಾನಿನ ವ್ಯವಸ್ಥೆ ಹಾಗೂ ನಿಯಮಗಳ ಅಡಿಯಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ. ಇರಾನ್ ಎಂದಿಗೂ ಅಮೆರಿಕನ್ನರನ್ನು ನಂಬಿಲ್ಲ ಮತ್ತು ಮುಂದೆಯೂ ನಂಬುವುದಿಲ್ಲ ಎಂದು ಗಾಲಿಬಾಫ್ ವಾಷಿಂಗ್ಟನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಮ್ಮ ಶಕ್ತಿಶಾಲಿ ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದೆ. ನಾವು ವಿಧಿಸಿದ್ದ ಆರ್ಥಿಕ ದಿಗ್ಬಂಧನವು ಬಾಂಬ್‌ಗಳನ್ನು ಬೀಳಿಸುವುದಕ್ಕಿಂತಲೂ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ. ಜಲಮಾರ್ಗವನ್ನು ಮುಕ್ತವಾಗಿಡಲು ನಾವು ಯಶಸ್ವಿಯಾಗಿದ್ದೇವೆ ಎಂದು ಹೇಳುವ ಮೂಲಕ ಇರಾನ್ ನಾಯಕರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles