ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ

ಉದ್ಯಾವರ ಸಮೀಪದ ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಪಿತ್ರೋಡಿ ನಿವಾಸಿ ಹರ್ಷಿತ್ ಶೆಟ್ಟಿ (28) ಮೃತ ಯುವಕ. ಬೆಳಗ್ಗೆ ಕ್ರಿಕೆಟ್ ಆಡಲು ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ಮನೆಗೆ ಮರಳದ ಹಿನ್ನೆಲೆ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದರು. ಇದನ್ನೂ

ಪಾಪನಾಶಿನಿ ಸೇತುವೆಯ ಮೇಲೆ ದ್ವಿಚಕ್ರ ವಾಹನ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ಅನುಮಾನ ಮತ್ತಷ್ಟು ಗಾಢವಾಯಿತು. ಸ್ಥಳೀಯರು ಹಾಗೂ ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಯಿತು. ಸಂಜೆಯ ವೇಳೆಗೆ ನದಿಯಲ್ಲಿ ಹರ್ಷಿತ್ ಮೃತದೇಹ ಪತ್ತೆಯಾಗಿದೆ.ಮಲ್ಪೆಯ ಸೊಸೈಟಿಯೊಂದರಲ್ಲಿ ಹರ್ಷಿತ್‌ ಉದ್ಯೋಗಿಯಾಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles