ತಮಿಳುನಾಡು ವಿಧಾನಸಭೆಯಲ್ಲಿ (Tamilnadu Assembly) ಇಂದು (ಜೂ.23) ನಡೆದ ಅಧಿವೇಶನ ರಾಜಕೀಯ ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ವಿಜಯ್ (CM Vijay) ಅವರು ಭಾಷಣದ ವೇಳೆ ಕೈ ಸನ್ನೆ ಮಾಡುತ್ತಿದ್ದಂತೆ ವಿರೋಧ ಪಕ್ಷ ಡಿಎಂಕೆ (DMK) ಶಾಸಕರು ಸದನದಿಂದ ಹೊರನಡೆದಿದ್ದಾರೆ.
ಭಾಷಣದ ವೇಳೆ ಸಿಎಂ ಜೋಸೆಫ್ ವಿಜಯ್ (CM Joseph Vijay) ಮಾಡಿದ ಸನ್ನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರು ಈ ಹಿಂದೆ ಮಾಡಿದ್ದ ಕೈ ಸನ್ನೆಯನ್ನೇ ಇದೀಗ ವಿಜಯ್ ಮರುಸೃಷ್ಟಿಸಿದ್ದಾರೆ ಎನ್ನಲಾಗಿದೆ. ವಿಜಯ್ ಈ ಸನ್ನೆ ಮಾಡುತ್ತಿದ್ದಂತೆ ಆಡಳಿತಾರೂಢ ಟಿವಿಕೆ (TVK) ಪಕ್ಷದ ಶಾಸಕರು ಮೇಜು ತಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ







