ಕರ್ನಾಟಕದ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ (JDS) ಪಕ್ಷದ ಕೆಲವು ಶಾಸಕರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಅಡ್ಡ ಮತದಾನ (Cross Voting) ಮಾಡಿರುವುದು ಮೈತ್ರಿಕೂಟದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೆಚ್.ಡಿ. ಕುಮಾರ್‌ಸ್ವಾಮಿ ಅವರಿಗೆ ತುರ್ತು ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಅಡ್ಡ ಮತದಾನ ಮಾಡಿದ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲು ಜೆಡಿಎಸ್ ಸಿದ್ಧತೆ ನಡೆಸುತ್ತಿದೆ







