ಭಾರತ ಮಹಿಳಾ ತಂಡ ಸದ್ಯ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನಲ್ಲಿ ಆಡುತ್ತಿದೆ. ತಾನಾಡಿದ ಮೊದಲ ಗುಂಪಿನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ 2 ಜಯ, 1 ಸೋಲು ಕಂಡಿದೆ. ಈ ಮೂಲಕ 4 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಈ ವೇಳೆ ಟೀಮ್ ಇಂಡಿಯಾದ ಯುವ ಬೌಲರ್ ಶ್ರೀ ಚರಣಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಎಲ್ಲರ ಗಮನ ಸೆಳೆದಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಕೇವಲ ಒಂದು ವರ್ಷದೊಳಗೆ, ಅವರು ವಿಶ್ವದ ನಂಬರ್ 1 ಟಿ 20ಬೌಲರ್ ಆಗಿದ್ದಾರೆ. ಅವರು ಪ್ರಸ್ತುತ 753 ರೇಟಿಂಗ್ ಪಾಯಿಂಟ್ಗಳೊಂದಿಗೆ ಟಿ20 ಬೌಲರ್ಗಳ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಅವರು ಕಳೆದ ವರ್ಷ ಜೂನ್ 28 ರಂದು ತಮ್ಮ ಮೊದಲ ಟಿ 20 ಪಂದ್ಯವನ್ನು ಆಡಿದ್ದರು.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ 20 ವಿಶ್ವಕಪ್ನಲ್ಲಿ ಶ್ರೀ ಚರಣಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕೇವಲ ಮೂರು ಪಂದ್ಯಗಳಲ್ಲಿ 10 ವಿಕೆಟ್ಗಳನ್ನು ಕಬಳಿಸಿದ್ದು, ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇವರು ಒಂದು ಸ್ಥಾನ ಬಡ್ತಿ ಪಡೆದಿದ್ದು, ಈ ಸಾಧನೆ ಮಾಡಿದ್ದಾರೆ.







