22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿವಿವಾದಗಳ ಸುಳಿಯಲ್ಲಿದ್ದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಮರುಪರೀಕ್ಷೆಯು ದೇಶಾದ್ಯಂತ ಯಾವುದೇ ಪ್ರಮುಖ ಅಹಿತಕರ ಘಟನೆಗಳಿಲ್ಲದೆ ಅತ್ಯಂತ ಸುಲಲಿತವಾಗಿ ಮುಕ್ತಾಯಗೊಂಡಿದೆ. ಈ ಪರೀಕ್ಷೆಯಲ್ಲಿ ದೇಶದಾದ್ಯಂತ ಸುಮಾರು 22.79 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳು ಭಾಗವಹಿಸಿದ್ದರು. ಕೇಂದ್ರ ಸರ್ಕಾರ ಬಿಗಿ ಭದ್ರತೆ ಹಾಗೂ ತಂತ್ರಜ್ಞಾನದ ನೆರವಿನೊಂದಿಗೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು.







