ಕನ್ನಡದ ಸ್ಟಾರ್ ನಟಿ ರುಕ್ಮಿಣಿ ವಸಂತ್ ಅವರ ಮುಖವನ್ನು ದುರ್ಬಳಕೆ ಮಾಡಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಡೀಪ್ಫೇಕ್ (Deepfake) ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಭಾರಿ ಯಶಸ್ಸು ಸಾಧಿಸಿದ್ದಾರೆ. ಈ ಜಾಲದ ಬೆನ್ನುಹತ್ತಿದ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಚಿತ್ರರಂಗದ ತಾರೆಯರನ್ನು ಗುರಿಯಾಗಿಸಿಕೊಂಡು ಸೃಷ್ಟಿಸಲಾಗುತ್ತಿರುವ ಇಂತಹ ನಕಲಿ ಕಂಟೆಂಟ್ಗಳ ವಿರುದ್ಧ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ ಎಂದು ಸೈಬರ್ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.







