ಸ್ಯಾಂಡಲ್‌ವುಡ್‌ನ ಗ್ಲೋಬಲ್ ಸ್ಟಾರ್ ಯಶ್ ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಟಾಕ್ಸಿಕ್’ (Toxic) ಬಿಡುಗಡೆ ದಿನಾಂಕ ಕೊನೆಗೂ ಫೈನಲ್ ಆಗಿದೆ. ಚಿತ್ರದ ಚಿತ್ರೀಕರಣ ವಿಳಂಬವಾಗುತ್ತಿದೆ ಎಂಬ ಎಲ್ಲ ವದಂತಿಗಳಿಗೆ ಬ್ರೇಕ್ ಹಾಕಿರುವ ಚಿತ್ರತಂಡ, ಮುಂಬರುವ ಆಗಸ್ಟ್ 26 ರಂದು ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ ಎಂದು ಘೋಷಿಸಿದೆ. ಇದು ಯಶ್ ಅಭಿಮಾನಿಗಳಲ್ಲಿ ಹೊಸ ಹಬ್ಬದ ವಾತಾವರಣ ಸೃಷ್ಟಿಸಿದೆ.







