ಅಮೆರಿಕದಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಬಿಗ್ ಶಾಕ್, ‘ಡ್ಯುರೇಷನ್ ಆಫ್ ಸ್ಟೇಟಸ್’ ರದ್ದುಗೊಳಿಸಿದ US ಸರ್ಕಾರ

ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಾಗೂ ಅಲ್ಲಿಗೆ ತೆರಳಲು ಸಿದ್ಧತೆ ನಡೆಸುತ್ತಿರುವ ಲಕ್ಷಾಂತರ ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕ ಸರ್ಕಾರ ದೊಡ್ಡ ಆಘಾತ ನೀಡಿದೆ. ಅಂತರಾಷ್ಟ್ರೀಯ ವಿದ್ಯಾರ್ಥಿಗಳಿಗೆ ನೀಡಲಾಗುವ ಎಫ್-1 ವೀಸಾ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದ್ದು, ದಶಕಗಳಿಂದ ಜಾರಿಯಲ್ಲಿದ್ದ ‘ಡ್ಯುರೇಷನ್ ಆಫ್ ಸ್ಟೇಟಸ್’ ನಿಯಮವನ್ನು ಸಂಪೂರ್ಣವಾಗಿ ರದ್ದುಗೊಳಿಸಲು ಶ್ವೇತಭವನದ ‘ಆಫೀಸ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಬಜೆಟ್’ ಅಂತಿಮ ಒಪ್ಪಿಗೆ ನೀಡಿದೆ.

ಇದರ ಬದಲಾಗಿ ಗರಿಷ್ಠ 4 ವರ್ಷಗಳ ನಿಗದಿತ ಅವಧಿಯ ವೀಸಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದ್ದು, ಇದು ಅಮೆರಿಕದಲ್ಲಿ ನೆಲೆಸುವ ಕನಸು ಕಂಡಿದ್ದ ವಿದ್ಯಾರ್ಥಿಗಳ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹಳೆಯ ನಿಯಮದ ಪ್ರಕಾರ, ಅಂತರಾಷ್ಟ್ರೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪೂರ್ಣಗೊಳ್ಳುವವರೆಗೆ ಅಮೆರಿಕದಲ್ಲಿ ನೆಲೆಸಲು ಅವಕಾಶವಿತ್ತು. ಅಂದರೆ, ಅವರು ನಿಯಮಗಳ ಅಡಿಯಲ್ಲಿ ಪೂರ್ಣಾವಧಿ ವಿದ್ಯಾರ್ಥಿಯಾಗಿರುವವರೆಗೂ ಮತ್ತು ಕೋರ್ಸ್ ಪ್ರಗತಿಯಲ್ಲಿರುವವರೆಗೂ ನಿರ್ದಿಷ್ಟ ದಿನಾಂಕದ ಮಿತಿಯಿಲ್ಲದೆ ಅಲ್ಲಿಯೇ ಇರಬಹುದಿತ್ತು. ‘ಸ್ಟೂಡೆಂಟ್ ಅಂಡ್ ಎಕ್ಸ್‌ಚೇಂಜ್ ವಿಸಿಟರ್ ಇನ್ಫಾರ್ಮೇಶನ್ ಸಿಸ್ಟಮ್’ ಮೂಲಕ ನಡೆಯುತ್ತಿತ್ತು. ಆದರೆ, ಡಿಪಾರ್ಟ್‌ಮೆಂಟ್ ಆಫ್ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಪ್ರಸ್ತಾಪಿಸಿದ್ದ ಹೊಸ ನಿಯಮಕ್ಕೆ ಈಗ ಅಂತಿಮ ಅನುಮೋದನೆ ಸಿಕ್ಕಿದ್ದು, ವಿದ್ಯಾರ್ಥಿಗಳಿಗೆ ಗರಿಷ್ಠ 4 ವರ್ಷ ಅಥವಾ ಅವರ ಕೋರ್ಸ್‌ನ ಅವಧಿ, ಇದರಲ್ಲಿ ಯಾವುದು ಕಡಿಮೆಯೋ ಅಷ್ಟು ಸಮಯ ಮಾತ್ರ ಅಮೆರಿಕದಲ್ಲಿ ಉಳಿಯಲು ಅವಕಾಶ ನೀಡಲಾಗುತ್ತದೆ.

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles