ಭಾರತದ ಲೆಜೆಂಡರಿ ಆಲ್‌ರೌಂಡರ್, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ (Yuvaraj Singh) ಅವರು 2027ರ ಐಪಿಎಲ್‌ನಿಂದ (IPL 2027) ತಮ್ಮ ಕೋಚಿಂಗ್ ವೃತ್ತಿಜೀವನವನ್ನು ಆರಂಭಿಸಲು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, 2027ರ 20ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಯುವರಾಜ್ ಸಿಂಗ್ ಕೋಚಿಂಗ್ ನೀಡಲು ಸಜ್ಜಾಗುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್
ಇದರ ಜೊತೆಗೆ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗೆ ಮರಳುವುದು ಬಹುತೇಕ ಖಚಿತವಾಗಿದ್ದು, ಅವರು ಯುವರಾಜ್ ಸಿಂಗ್ ಅವರನ್ನೂ ಡಗೌಟ್‌ಗೆ ಕರೆತರಲು ಬಯಸಿದ್ದಾರೆ ಎನ್ನಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ-ಮಾಲೀಕರಾದ ಜಿಎಂಆರ್ ಗ್ರೂಪ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ತಲಾ ಎರಡು ವರ್ಷಗಳ ಅವಧಿಗೆ ತಂಡದ ಆಡಳಿತವನ್ನು ಬದಲಿಸಿಕೊಂಡು ನಿರ್ವಹಿಸುತ್ತವೆ. 2025 ಮತ್ತು 2026ರ ಸೀಸನ್‌ಗಳಲ್ಲಿ ಜಿಎಂಆರ್ ತಂಡ ಮುನ್ನಡೆಸಿತ್ತು. ಈಗ 2027ರಿಂದ ಮುಂದಿನ ಎರಡು ವರ್ಷಗಳ ಕಾಲ ಜೆಎಸ್‌ಡಬ್ಲ್ಯೂ ಗ್ರೂಪ್ ಫ್ರಾಂಚೈಸಿಯ ನಿಯಂತ್ರಣವನ್ನು ತೆಗೆದುಕೊಳ್ಳುತ್ತಿದ್ದು, ಈ ಹಿನ್ನೆಲೆ ದೊಡ್ಡ ಮಟ್ಟದ ಬದಲಾವಣೆಗಳು ನಡೆಯುತ್ತಿವೆ.







